by athreebook | Nov 19, 2009 | ಅಭಯಾರಣ್ಯ, ದೀವಟಿಗೆ ಪ್ರದರ್ಶನ, ಯಕ್ಷಗಾನ
ಕೇಳಿ ಹೊಡೆದ್ರೀ, ಸಭಾಕ್ಲಾಸ್ ಕೊಟ್ರೀ, ನಿಜದ ದೀವಟಿಗೆ ಆಟ ಎಲ್ರೀ ಎನ್ನಬೇಡಿ. ಹಾಡು, ಭಾಷಣಗಳನ್ನಾದರೋ ನನ್ನ ಮಿತಿಯ ಲಿಖಿತ ಸಾಹಿತ್ಯದಲ್ಲಿ ಹಿಂದಿನೆರಡು ಕಥಾನಕಗಳಲ್ಲಿ ‘ಸುಧಾರಿಸಿದ್ದು’ ನಿಜ. ಅಂದ ಮಾತ್ರಕ್ಕೆ ಬಹುಮುಖೀ ಯಕ್ಷಗಾನ ಬಯಲಾಟಕ್ಕೆ ನಾನು ನೇರ ನುಗ್ಗುವುದು ಸರಿಯಾಗದು. ಹಾಗಾಗಿ ಅಂದಿನ ಪ್ರದರ್ಶನದ ಕುರಿತು ಸುಧಾ...
by athreebook | Nov 12, 2009 | ಅಭಯಾರಣ್ಯ, ದೀವಟಿಗೆ ಪ್ರದರ್ಶನ, ಯಕ್ಷಗಾನ
ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ ಪೂರ್ವಾಹ್ನವಿಡೀ ರಣಗುಡುವ ಬಿಸಿಲಿನಲ್ಲಿ, ಕಲ್ಲುಮುಳ್ಳುಗಳ ಪದವಿನಲ್ಲಿ ಕೊನೆಗಳಿಗೆಯ ಸಿದ್ಧತೆಗಳನ್ನು ಮಾಡಿಕೊಂಡೆವು. ದಾರಿಬದಿಗೆ ಅಭಯಾರಣ್ಯದ ಬ್ಯಾನರು ಕಟ್ಟಿದ್ದಾಗಿತ್ತು. ಅಲ್ಲೆ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿ...
by athreebook | Nov 6, 2009 | ಅಭಯಾರಣ್ಯ, ದೀವಟಿಗೆ ಪ್ರದರ್ಶನ, ಯಕ್ಷಗಾನ
‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು. ಎತ್ತರಿಸಿದ ಚೌಕಾಕಾರದ ವೇದಿಕೆಯ ಮೂರೂ ಬದಿಗೆ ಕಂಬದ ಮೇಲಿನುದ್ದಕ್ಕೂ ಮೇಲಿನಡ್ಡಕ್ಕೂ ಬಿಗಿದ ಟ್ಯೂಬ್ ಲೈಟುಗಳು ಏಕಕಾಲಕ್ಕೆ ರಂಗವನ್ನೂ ನಮ್ಮ ಕಣ್ಣನ್ನೂ ತುಂಬುತ್ತಿದ್ದವು. ರಂಗದ ಎದುರಿನ ಭಾರೀ ಬುರುಡೆಯ...
by athreebook | Oct 29, 2009 | ಯಕ್ಷಗಾನ
ಡಾ| ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ (ಕಲ್ಲುಗುಂಡಿ), ಇದು ಹಲವು ವರ್ಷಗಳಿಂದ ವರ್ಷಕ್ಕೊಮ್ಮೆ ನಡೆಸುತ್ತಿರುವ ಯಕ್ಷೋತ್ಸವ ಬಲು ದೊಡ್ಡ ಕಲಾವಿದರ ಕೂಡುವಿಕೆಯಲ್ಲೂ ಎಲ್ಲೆಲ್ಲಿಂದಲೋ ಬರುವ ಪ್ರೇಕ್ಷಕರಿಂದಲೂ ಬಹುಖ್ಯಾತವಾಗಿದೆ. ಈ ಪ್ರತಿಷ್ಠಾನದಂತೆಯೇ ಇದರ ಅಘೋಷಿತ ಸಹವ್ಯವಸ್ಥೆಗಳು ಮಂಗಳೂರು ಬಳಿಯ ಕೈರಂಗಳದಲ್ಲೂ...
by athreebook | Oct 24, 2009 | ವೈಚಾರಿಕ
ಕರ್ನೂಲಿನ ನನ್ನ ಹಿರಿಯ ಗೆಳೆಯ ಶ್ರೀ ಚಂದ್ರಶೇಖರ ಕಲ್ಕೂರರ ಸ್ಥಿರ, ಚರ ಸೊತ್ತುಗಳೆಲ್ಲ ಈಚೆಗೆ ಅವರ ಮಾತಿನಲ್ಲೇ ಹೇಳುವಂತೆ ‘ಮೂವತ್ತೆರಡು ಗಂಟೆಗಳ ಕಾಲ ತುಂಗಭದ್ರಮ್ಮನ ಹೊಟ್ಟೆಯಲ್ಲಿತ್ತು. ಚಂದ್ರಶೇಖರ ಕಲ್ಕೂರರ ಅಜ್ಜ ಊರಿನಲ್ಲಿ (ಉಡುಪಿ ಜಿಲ್ಲೆಯ ಬ್ರಹ್ಮಾವರ) ಹೊಟ್ಟೆಗೂ ಗತಿಯಿಲ್ಲದ ಕಾಲದಲ್ಲಿ ‘ಒಂದು ಸೌಟು’ ಹಿಡಿದುಕೊಂಡು...