ದೀವಟಿಗೆಯಲ್ಲಿ ಸಭಾಕ್ಲಾಸ್

ದೀವಟಿಗೆಯಲ್ಲಿ ಸಭಾಕ್ಲಾಸ್

ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ ಪೂರ್ವಾಹ್ನವಿಡೀ ರಣಗುಡುವ ಬಿಸಿಲಿನಲ್ಲಿ, ಕಲ್ಲುಮುಳ್ಳುಗಳ ಪದವಿನಲ್ಲಿ ಕೊನೆಗಳಿಗೆಯ ಸಿದ್ಧತೆಗಳನ್ನು ಮಾಡಿಕೊಂಡೆವು. ದಾರಿಬದಿಗೆ ಅಭಯಾರಣ್ಯದ ಬ್ಯಾನರು ಕಟ್ಟಿದ್ದಾಗಿತ್ತು. ಅಲ್ಲೆ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿ...
ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…

ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…

‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು. ಎತ್ತರಿಸಿದ ಚೌಕಾಕಾರದ ವೇದಿಕೆಯ ಮೂರೂ ಬದಿಗೆ ಕಂಬದ ಮೇಲಿನುದ್ದಕ್ಕೂ ಮೇಲಿನಡ್ಡಕ್ಕೂ ಬಿಗಿದ ಟ್ಯೂಬ್ ಲೈಟುಗಳು ಏಕಕಾಲಕ್ಕೆ ರಂಗವನ್ನೂ ನಮ್ಮ ಕಣ್ಣನ್ನೂ ತುಂಬುತ್ತಿದ್ದವು. ರಂಗದ ಎದುರಿನ ಭಾರೀ ಬುರುಡೆಯ...