by athreebook | Oct 1, 2011 | ಪ್ರವಾಸ ಕಥನ, ಲಘು ಬರಹಗಳು
ಪ್ರಿಯ ನಾರಾಯಣಾ, ಧರ್ಮಸ್ಥಳದಲ್ಲಿ ಪ್ರತಿ ವರ್ಷವೂ ತಾಳಿ, ಸೀರೆ, ಪಂಚೆ ಕೊಟ್ಟು ಉಚಿತ ವಿವಾಹಯೋಗ ಕಲ್ಪಿಸುವುದು ಯಾರಿಗೆ ಗೊತ್ತಿಲ್ಲ. ಮತ್ತೆ ಯಾವುದೇ ನೋಂದಣಿ ಇಲಾಖೆಯಲ್ಲಿ ಧರ್ಮನಿರಪೇಕ್ಷವಾಗಿ, ಕಾನೂನು ಪ್ರಕಾರ ದಾಂಪತ್ಯ ಸಂಬಂಧ ಕುದುರಿಸುವುದು ನಮಗೆ ತಿಳಿಯದ್ದೂ ಅಲ್ಲ, ತಿರಸ್ಕಾರವೂ ಇಲ್ಲ. (ಇಂಥವೇ ಆಶಯಗಳ ಒಂದು ಪರಿಷ್ಕೃತ ರೂಪ...
by athreebook | Sep 24, 2011 | ಪ್ರವಾಸ ಕಥನ, ಲಘು ಬರಹಗಳು
ಪ್ರಿಯ ನಾರಾಯಣ (-ರಾವ್, ನನ್ನ ಓರ್ವ ಚಿಕ್ಕಪ್ಪ) `ರಾಮುಗೆ (ನಾರಾಯಣನ ಹಿರಿಯ ಮಗ – ರಾಮಚಂದ್ರ ರಾವ್ ದ ಸೆಕೆಂಡ್!) ಹುಡುಗಿ ನಿಶ್ಚಯವಾಯ್ತಂತೆ, ಸದ್ಯದಲ್ಲೇ ಬದ್ಧವಂತೆ, ಅಜ್ಜಿಯ ವರ್ಷಾಂತಿಕವಾಗದೇ ಮದುವೆ ಇಲ್ಲ್ವಂತೆ…’ ಹೀಗೇ ಯೋಚನೆಗಳು ರೂಪುಗೊಳ್ಳುವ ಹಂತದಲ್ಲೇ (ಸೂಕ್ಷ್ಮ ಸಂದೇಶ, ಚರವಾಣಿ, ಮುಖವಾಣಿಗಳ...
by athreebook | Jul 31, 2011 | ಲಘು ಬರಹಗಳು
[ತೆರೆ ಸರಿಯುತ್ತಿರುವಂತೆ ಖಾಲೀ ಮುಖ ಹೊತ್ತ ತರುಣನೊಬ್ಬ ಪುಸ್ತಕ ವ್ಯಾಪಾರಿಯೊಬ್ಬನ ಗಲ್ಲಾದ ಎದುರು ಬಂದು ನಿಲ್ಲುತ್ತಾನೆ. ವ್ಯಾಪಾರಿ ‘ಏನ್ ಕೊಡ್ಲೀ’ ಎನ್ನುವಂತೆ ಹುಬ್ಬು ಹಾರಿಸುತ್ತಾನೆ. ತರುಣ ಏನೋ ಹುಡುಕುವವನಂತೆ ಆ ಈ ಕಿಸೆ ತಡಕಾಡುತ್ತಾ] ತರುಣ: ಅತ್ರಿ ಬುಕ್ ಹೌಸ್! ವ್ಯಾಪಾರಿ: ಹೂಂ, ಹೌಸ್ ಅಲ್ಲ ಸೆಂಟರ್. ಬಂದಾಯಿತಲ್ಲ,...
by athreebook | Feb 18, 2010 | ಲಘು ಬರಹಗಳು, ವೈಚಾರಿಕ
ಪುಸ್ತಕ ಅಂಗಡಿಯಲ್ಲಿ ಕಾಗದದ ಮರುಬಳಕೆಯ ಅವಕಾಶ ಅಸಂಖ್ಯ. ಅವನ್ನು ಆಡುನುಡಿಯಲ್ಲೇ ಹೇಳುವುದಾದರೆ ಕ್ಯಾಟಲಾಗು (ಬರಿಯ ಪಟ್ಟಿಯಲ್ಲ, ಪ್ರಚಾರ ಸಾಹಿತ್ಯವೂ ಆಗಬಹುದು), ಇನ್ವಿಟೇಶನ್ನು (ಅಂಗಡಿಯಲ್ಲಿ ವಿತರಿಸಬೇಕೆಂಬ ಬೇಡಿಕೆಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲೂ), ಪಬ್ಲಿಷರ್ಸ್ ಡಿಸ್ಟ್ರಿಬ್ಯೂಟರ್ಸ್ ಮತ್ತು ವಿವಿಧ ಇನ್ಸ್ಟಿಟ್ಯೂಶನ್ನುಗಳ...
by athreebook | Oct 17, 2009 | ಪ್ರವಾಸ ಕಥನ, ಲಘು ಬರಹಗಳು
ಇತಿಹಾಸದ ‘ಅಶೋಕ’ವನ್ನು ನನ್ನ ತಂದೆತಾಯಿಯರು ನನಗೆ ಕೊಟ್ಟದ್ದು ನಿಜ. ಆದರೆ ‘ಚಕ್ರವರ್ತಿ’ಯನ್ನೂ ಎಳೆದುಕೊಳ್ಳುವಂತಾದ್ದು ನನ್ನ ಹವ್ಯಾಸ ಬಲದಲ್ಲಿ. ದಕ್ಷಿಣ ಭಾರತದ ಒಂದು ಸಣ್ಣ ಅಂಶವನ್ನೂ ಸೇರಿಸಿದಂತೆ ಈ ವಲಯದ ನನ್ನ ಮೋಟಾರು ಸೈಕಲ್ ಪ್ರವಾಸ ಕಥನಗಳ ಸಂಕಲನವನ್ನು ನಾನೇ ‘ಚಕ್ರವರ್ತಿಗಳು’ ಎಂದು ಹೆಸರಿಸಿ, ಪ್ರಕಟಿಸಿದ್ದು (ಸದ್ಯ...
by athreebook | Feb 1, 2009 | ಲಘು ಬರಹಗಳು
ವಿಶೇಷ ಸೂಚನೆ: ಇದು ಹೆಂಗಸರಿಗಲ್ಲ! ಮೀಸೆ ಬರುವ ಮೊದಲು ಹೆಚ್ಚಿನ ಹುಡುಗರು ಕದ್ದುಮುಚ್ಚಿ ಅಪ್ಪನ ರೇಜರ್ ಮುಖದ ಮೇಲಾಡಿಸಿಕೊಂಡದ್ದಿರಬಹುದು. ಆದರೆ ಒಮ್ಮೆ ಬರತೊಡಗಿದ ಮೇಲೆ? ನನ್ನ ಅಜ್ಜ (ಮಾತಾಮಹ) ನಾನು ಎಳೆಮೀಸೆ ಬಿಟ್ಟಾಗ “ನಮ್ಮ ಕುಟುಂಬದಲ್ಲಿ ಯಾರೂ ಮೀಸೆ ಬಿಟ್ಟವರಲ್ಲ, ತೆಗೆದುಬಿಡು” ಎನ್ನುತ್ತಿದ್ದರು. ಇಂಗ್ಲಿಷ್...