ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್‍ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.

read more
ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೨೮ ಎಕೋ ಹೆರನ್ ಎಂಬ ಅಮೆರಿಕನ್ ಲೇಖಕಿಯ `ದ...

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಕಾಗದ ಮಡಚೋಣ

ಕಾಗದ ಮಡಚೋಣ

ಓರಿಗೆಮಿ - ಕಾಗದ ಮಡಚಿ ಆಕೃತಿ ಮೂಡಿಸುವ ಕಲೆ, ಇಂದು ನಮ್ಮ ಬಾಲಲೋಕದಲ್ಲಿ ಪಠ್ಯದ ಭಾಗವೇ ಆಗಿರುವ ಕ್ರೀಡೆಗೆ ಜಪಾನೀ...

read more