ಗುಹಾ ನೆನಪುಗಳು, ಇನ್ನಷ್ಟು

ಗುಹಾ ನೆನಪುಗಳು, ಇನ್ನಷ್ಟು

ಮಂಗಳೂರಿನಲ್ಲಿ ನಾನು ವೃತ್ತಿಪರನಾಗಿ (ಪುಸ್ತಕೋದ್ಯಮಿ – ೧೯೭೫) ನೆಲೆಸಿದಂದಿನಿಂದ ‘ಸಾಹಸ’ದ ಹೊದಿಕೆಯಲ್ಲಿ ಪ್ರಾಕೃತಿಕ ಅನ್ವೇಷಣೆಯನ್ನು (ಬೆಟ್ಟ, ಕಾಡು, ಜಲಪಾತ ಇತ್ಯಾದಿ ಸೇರಿದಂತೆ) ಗಟ್ಟಿ ಹವ್ಯಾಸವಾಗಿ ರೂಢಿಸಿಕೊಂಡೆ. ಅದರಲ್ಲಿ ಗಳಿಸಿದ ಸಂತೋಷ ಇತರರಿಗೂ ಪ್ರೇರಕವಾಗಬೇಕೆಂಬ ಆಸೆಯಲ್ಲಿ ಯುಕ್ತ ಪ್ರಚಾರಕ್ಕೂ ಇಳಿದೆ. ಆ...